ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಬಾಲಕಿಗೆ ಕಾರು ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಪರಿಣಾಮ ಬಾಲಕಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಕಾರು ಚುನಾವಣಾ ಪ್ರಚಾರದ್ದು ಆಗಿದ್ದು,ಕಾರು ತೆರಳುತ್ತಿರುವ ಸಂದರ್ಭ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಯಿಷಾ ಶೈಮಾ ಗಾಯಗೊಂಡಿರುವ ಬಾಲಕಿ.
ಪುತ್ತೂರಿನ ಬಿಜೆಪಿ ಅಭ್ಯರ್ಥಿ ಹಾಗೂ ಕಾರ್ಯಕರ್ತರು ಜಿಡೆಕಲ್ಲು ಕಡೆಯಿಂದ ಚುನಾವಣಾ ಪ್ರಚಾರ ನಡೆಸಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೆರೆಮೂಲೆ ಸಮೀಪ ಮೂರು ಕಾರುಗಳು ರಸ್ತೆಯಲ್ಲಿ ಸಂಚರಿಸುತ್ತಿತ್ತು. ಮೊದಲ ಕಾರು ರಸ್ತೆ ದಾಟುತ್ತಿದ್ದ ಐದು ವರ್ಷದ ಬಾಲಕಿಗೆ ಡಿಕ್ಕಿ ಹೊಡೆದಿದೆ.ಕೂಡಲೇ ಆಕೆಯನ್ನು ಅದೇ ಕಾರಿನಲ್ಲಿ ಕರೆ ತಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿ ನಡೆದಿದೆ ಎಂದು ವರದಿಯಾಗಿದೆ.