ನ್ಯೂಸ್ ನಾಟೌಟ್ : ಹಿರಿಯ ರಾಜಕೀಯ ಮುತ್ಸದ್ದಿ ಚಂದ್ರಶೇಖರ ಮೇಲ್ನಾಡು(೭೪) ಅವರು ವಿಧಿವಶರಾಗಿದ್ದಾರೆ.ಇಂದು ಮುಂಜಾನೆ ಬೆಳಗ್ಗಿನ ಉಪಹಾರ ಸೇವಿಸಿದ ಬಳಿಕ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಹೇಳಲಾಗಿದೆ.ಕುಸಿದು ಬಿದ್ದಿದ್ದ ಅವರನ್ನು ಕೂಡಲೇ ಅವರ ಪುತ್ರ ಗುರುಪ್ರಸಾದ್ ಮೇಲ್ನಾಡುರವರು ಕಡಬ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆಯೇ ಅವರು ಅಸುನೀಗಿದರೆಂದು ತಿಳಿದು ಬಂದಿದೆ. ಎಲ್ಲರೊಂದಿಗೆ ಒಡನಾಟ ಬೆಳೆಸಿಕೊಂಡಿದ್ದ ಚಂದ್ರಶೇಖರ ಮೇಲ್ನಾಡುರವರು ಏನೆಕಲ್ಲು ಪ್ರಾಥಮಿಕ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿಯೂ ಗುತ್ತಿಗಾರು ತಾಲೂಕು ಪಂಚಾಯಿತ್ ನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.