21.6 C
Sullia
Sunday, March 8, 2026

ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, 10ಕ್ಕೂ ಹೆಚ್ಚು ಮಂದಿ ಸಜೀವ ದಹನ..!

ನ್ಯೂಸ್ ನಾಟೌಟ್: ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿಗಾಹುತಿಯಾಗಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಲಾರಿ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತಿ ಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟು 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಸೀಬರ್ಡ್ ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್‌ ಸೇರಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸದ್ಯ ಬಸ್ಸಿನಿಂದ ಎಂಟು ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಶಿರಾ ಹಾಗೂ ಹಿರಿಯೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಬೆಂಗಳೂರಿನಿಂದ ಡಿಎನ್‌ಎ ಪರೀಕ್ಷಾ ತಂಡ ಬಂದಿದೆ ಎಂದು ಹೇಳಿದರು. ಸೀಬರ್ಡ್ ಬಸ್ಸಿನಲ್ಲಿದ್ದ 21 ಜನರು ಪತ್ತೆಯಾಗಿದ್ದು, 11 ಜನರು ಪತ್ತೆಯಾಗಿಲ್ಲ ಎಂದು ಚಿತ್ರದುರ್ಗ ಎಸ್‌ಪಿ ರಂಜಿತ್ ಹೇಳಿದ್ದಾರೆ.  ಲಾರಿ ಚಾಲಕ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರುವ ಸಾಧ್ಯತೆಯಿದೆ. ಚಾಲಕ ನಿರ್ವಾಹಕ ಸೇರಿ ಸೀಬರ್ಡ್ ಬಸ್ಸಿನಲ್ಲಿ 32 ಜನ ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ನೀಡಿದರು.

ಪ್ರಧಾನಿ ಮೋದಿ ಸಂತಾಪ: ಚಿತ್ರದುರ್ಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಾತ್ಕಾಲಿಕ ಪರಿಹಾರ (PNRF) 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles