ನ್ಯೂಸ್ ನಾಟೌಟ್: ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ.ಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಮತಪ್ರಚಾರದಲ್ಲಿ ತೊಡಗಿದ್ದಾರೆ.
ಈ ಸಂದರ್ಭ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್ ಕುಮಾರ್ ಅವರು ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು. ಜನರೊಂದಿಗೆ ಮಾತನಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.ಸಭೆಯನ್ನುದ್ದೇಶಿಸಿ ಮಾತನಾಡಿದರು.ನೀವು ನನ್ನ ಆಯ್ಕೆ ಮಾಡಿದ ಬಳಿಕ ನೀವು ನಿರೀಕ್ಷಿಸಿದ ಅಭಿವೃದ್ದಿ, ಪ್ರಗತಿ ಕಾರ್ಯಗಳು ಯಶಸ್ವಿಯಾಗಿ ನಡೆದಿವೆ. ಮೂಲಭೂತ ಸೌಕರ್ಯ ಸಹಿತ ಎಲ್ಲ ಕ್ಷೇತ್ರದಲ್ಲಿ ಶಕ್ತಿ ಮೀರಿ ಪ್ರಯತ್ನಗಳು ನಡೆದಿವೆ.ಈ ಬಾರಿಯ ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸಿ ಎಂದು ಹೇಳಿದರು.