ನ್ಯೂಸ್ ನಾಟೌಟ್: ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಲಾಗಿದೆ ಎಮದು ವರದಿ ತಿಳಿಸಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಶುಕ್ರವಾರ ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ತಮಿಳುನಾಡಿನ ನಡುರಸ್ತೆಯಲ್ಲೇ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದ್ದು, ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು.
ತಮಿಳುನಾಡು ಬಿಜೆಪಿಯ ಎಸ್ಸಿ-ಎಸ್ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು ಎನ್ನಲಾಗಿದೆ. ಪೂನಮಲ್ಲೆ ಹೆದ್ದಾರಿಯ ನಸರತ್ಪೇಟೆ ಸಿಗ್ನಲ್ ಬಳಿ ಕಾರು ಬಂದಾಗ ಏಕಾಏಕಿ ಶಂಕರ್ ಅವರ ಕಾರನ್ನು ಅಡ್ಡಗಟ್ಟಿ ಕಾರಿನ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಂದು ಹಾಕಿ ಪರಾರಿಯಾಗಿದ್ದಾರೆ .
ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಾಹಿತಿ ಪಡೆದ ನಸರತ್ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.