ನ್ಯೂಸ್ ನಾಟೌಟ್:ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಬಿಜೆಪಿಯ ಚಿಹ್ನೆ, ಪಕ್ಷದ ಹೆಸರು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಪಕ್ಷೇತರ ಅಭ್ಯರ್ಥಿ ತನ್ನ ಪ್ರಚಾರ ಸಾಮಗ್ರಿ, ಸಾಮಾಜಿಕ ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು, ಭಾವಚಿತ್ರವನ್ನು ಉಪಯೋಗಿಸುತ್ತಿದ್ದಾರೆ. ಓರ್ವ ಅಭ್ಯರ್ಥಿ ಚುನಾವಣಾ ಆಯೋಗ ತನಗೆ ನೀಡಿದ ಚಿಹ್ನೆಯನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಆದರೆ ಪಕ್ಷೇತರ ಅಭ್ಯರ್ಥಿ ಭಾರತೀಯ ಜನತಾ ಪಾರ್ಟಿಯ ಚಿಹ್ನೆ, ಇತರ ನೋಂದಣಿಗಳನ್ನು ಉಪಯೋಗಿಸುತ್ತಿರುವುದು ನೀತಿ ಸಂಹಿತೆ ಉಲ್ಲಂಘನೆ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.