ನ್ಯೂಸ್ ನಾಟೌಟ್: ಹಲವು ದಿನಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹೆಚ್ಚಿನ ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ.
ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 87 ಇದ್ದರೆ, PM10 121 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ.













