ನ್ಯೂಸ್ ನಾಟೌಟ್: ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಡಿ.23ರಂದು ಮುಂಜಾನೆ ಲಾರಿಯೊಂದು ಪಿಕಪ್ ಹಾಗೂ ಕಾರಿಗೆ ಡಿಕ್ಕಿಯಾಗಿ ದೆ. ಈ ವೇಳೆ ಲಾರಿ ಚಾಲಕ ನಿಲ್ಲಿಸದೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಪಿಕಪ್ ಚಾಲಕ ಹಾಗೂ ಪ್ರಯಾಣಿಕ ಗಾಯಗೊಂಡಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಹೇಂದ್ರ ಬೊಲೇರೋ ಸಿಟಿ ಪಿಕಪ್ ಗೂಡ್ಸ್ (KA 13, C 7520) ವಾಹನದಲ್ಲಿ ಸಕಲೇಶಪುರದಿಂದ ಸರಕು ತುಂಬಿಸಿಕೊಂಡು ಮಂಗಳೂರು ಕಡೆಗೆ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.













