ನ್ಯೂಸ್ ನಾಟೌಟ್ : ಬಜರಂಗ ದಳವನ್ನು ನಿಷೇಧಿಸುವ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ ಕಾಂಗ್ರೆಸ್ ವಿರುದ್ಧ ಇದೀಗ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರಿಂದ ವ್ಯಾಪಕ ಟೀಕೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಠಕ್ಕರ್ ನೀಡುವುದಕ್ಕೆ ಮುಂದಾಗಿರುವ ಬಿಜೆಪಿ ಇಂದು ಸಂಜೆ ರಾಜ್ಯಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಮುಂದಾಗಿದೆ.
ಸಂಜೆ ೭ ಗಂಟೆಯಿಂದ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಲಾಗಿದ್ದು ಎಲ್ಲ ಹನುಮ ಮಂದಿರಗಳಲ್ಲಿ ಹನುಮಾನ್ ಚಾಲೀಸಾ ಪಠಣ ಮೊಳಗಲಿದೆ. ಬಿಜೆಪಿಯ ಎಲ್ಲ ಶಾಸಕರು, ಸಂಘ ಪರಿವಾರದ ಕಾರ್ಯಕರ್ತರು ಈ ಚಾಲೀಸಾ ಪಠಣದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಅಧಿಕಾರಕ್ಕೆ ಬಂದರೆ ಬಜರಂಗ ದಳವನ್ನು ಬ್ಯಾನ್ ಮಾಡುವುದಾಗಿ ಘೋಷಿಸಿಕೊಂಡಿದೆ. ಇದನ್ನೇ ಗಟ್ಟಿಯಾಗಿ ಹಿಡಿದುಕೊಂಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಟೀಕಾಸ್ತ್ರಗಳ ಮಳೆಯನ್ನೇ ಸುರಿಸುತ್ತಿದೆ.