ನ್ಯೂಸ್ ನಾಟೌಟ್ : ಅಪರಿಚಿತ ವ್ಯಕ್ತಿಯೋರ್ವರ ಶವ ಸುಬ್ರಹ್ಮಣ್ಯ ದೇವಸ್ಥಾನದ ರಥ ಬೀದಿ ಬಳಿ ಪತ್ತೆಯಾಗಿದೆ.ವ್ಯಕ್ತಿಗೆ ಸುಮಾರು ೫೫ ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ.
ಮೇ.2ರಂದು ಬೆಳಗ್ಗೆ ಸುಮಾರು ಗಂಟೆ 8.00 ರ ಸಮಯಕ್ಕೆ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಈ ಸಂಬಂಧ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದು,ಇದೀಗ ಶವವನ್ನು ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.ವಾರಸುದಾರರು ಇದ್ದಲ್ಲಿ ಕೂಡಲೇ ಸುಬ್ರಹ್ಮಣ್ಯ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.