ನ್ಯೂಸ್ ನಾಟೌಟ್ : ಮೇ 8 ಹಾಗೂ 9ರಂದು ಕೊಡಗು ಜಿಲ್ಲೆಗೆ ಭಾರಿ ಮಳೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೊಡಗು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಪ್ರದೇಶಗಳಾದ ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಚಂಡ ಮಾರುತ ರೂಪುಗೊಳ್ಳುತ್ತಿದೆ. ಇದರಿಂದಾಗಿ ರಾಜ್ಯದ ವಿವಿಧ ಕಡೆ ಮಳೆ ಸುರಿಯುವ ಆತಂಕವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತವನ್ನು ಮೋಚಾ ಎಂದು ಹೆಸರಿಸಲಾಗಿದೆ. ಇದು ಮೇ ೬ ರಂದು ಬಂಗಾಳ ಕೊಲ್ಲಿಯಲ್ಲಿ ಶುರುವಾಗಿ ನಂತರದ ಹಂತದಲ್ಲಿ ಒಡಿಶಾ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.