ನ್ಯೂಸ್ ನಾಟೌಟ್: ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲಾಯೆನ್ಸಸ್ ಅವರಿಂದ ಗುತ್ತಿಗಾರಿನ ಹೃದಯ ಭಾಗದಲ್ಲಿ ಮಳಿಗೆ ಆರಂಭವಾಗಿದೆ. ಗೃಹಪಯೋಗಿ ವಸ್ತುಗಳು ಹಾಗೂ ಎಲ್ಲ ಎಲೆಕ್ಟ್ರಾನಿಕ್ಸ್ ವಸ್ತುಗಳು ಈ ಮಳಿಗೆಯಲ್ಲಿ ಲಭ್ಯವಿದೆ. ಈ ಮಳಿಗೆಯನ್ನು ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ಉದ್ಘಾಟಿಸಿದರು.
ಸಂಸ್ಥೆ ಉತ್ತಾರೋತ್ತರ ಅಭಿವೃದ್ದಿ ಹೊಂದುವಂತಾಗಲಿ ಎಂದು ಆಶೀರ್ವದಿಸಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗುತ್ತಿಗಾರು ಗ್ರಾ.ಪಂ ನ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕ್ಯಾಂಪ್ಕೋ ನಿರ್ದೇಶಕ ಎ.ವಿ ತೀರ್ಥರಾಮ, ಕೇಂದ್ರೀಯ ರಬ್ಬರ್ ಮಂಡಳಿಯ ನಿರ್ದೇಶಕ ಮುಳಿಯ ಕೇಶವ ಭಟ್, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಅಧ್ಯಕ್ಷ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಹಿರಿಯ ಮುಖಂಡ ಚಂದ್ರಶೇಖರ ಭಟ್ ತಳೂರು, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು, ದೇವಚಳ್ಳ ಗ್ರಾ.ಪಂ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ವಿನಯ್ ಮುಳುಗಾಡು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.













