ನ್ಯೂಸ್ ನಾಟೌಟ್: ಅತೀ ವೇಗದಿಂದ ಚಲಾಯಿಸಿಕೊಂಡು ಬಂದ ಐಷಾರಾಮಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ ಕಾರಿನ ಚಾಲಕನ ಕೈ ಮತ್ತು ಕಾಲುಗಳಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಗಾಲ್ಫ್ ಕೋರ್ಸ್ ರಸ್ತೆಯ ಸೆಕ್ಟರ್ 56ರಿಂದ ಸಿಕಂದರಪುರ ಕಡೆಗೆ ಸಂಚರಿಸುತ್ತಿತ್ತು. ಸೆಕ್ಟರ್ 27ರಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಬಳಿಕವೇ ಸರ್ವೀಸ್ ಲೇನ್ ಮೇಲೆ ಬಿದ್ದಿದೆ. ವಾಹನ ಮರಕ್ಕೆ ಡಿಕ್ಕಿ ಹೊಡೆದ ತಕ್ಷಣ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೆಂಪು ಬಣ್ಣದ ಪೋರ್ಷೆ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಕಾರಿನ ಬೆಲೆ ಸುಮಾರು 2.2 ಕೋಟಿ ರೂ. ಆಗಿದೆ. ಭೀಕರ ಅವಘಡದ ಕಾರಿನ ಚಿತ್ರಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.