ನ್ಯೂಸ್ ನಾಟೌಟ್: ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ ನಡೆಸುವುದು, ರಾಜಕೀಯ ಸಭೆ, ಸಮಾರಂಭ, ವಾಹನ ಜಾಥಾಗಳನ್ನು ನಿಷೇಧಿಸಿದ್ದಾರೆ. ಮತ ಎಣಿಕೆ ಕೇಂದ್ರವಾದ ಮಡಿಕೇರಿಯ ಸಂತ ಜೋಸೇಫರ ಕಾನ್ವೆಂಟ್ ಸುತ್ತಲಿನ 200 ಮೀ. ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿತ ಪ್ರದೇಶವಾಗಿದ್ದು, ಇಲ್ಲಿ ಖಾಸಗಿ ವಾಹನಗಳ ಪ್ರವೇಶ ಹಾಗೂ ಧ್ವನಿವರ್ಧಕ ಬಳಕೆ ನಿಷೇಧಿಸಿದ್ದಾರೆ.