ನ್ಯೂಸ್ ನಾಟೌಟ್: ಮತದಾನ ಮುಗಿಯುತ್ತಿದ್ದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಆರ್ಥಿಕ ವರ್ಷ 2023-24ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆಯನ್ನು ಅನುಮೋದಿಸಿದೆ ಎಂದು ವರದಿ ತಿಳಿಸಿದೆ.
ಅದರಂತೆ ಪ್ರತಿ ಯೂನಿಟ್ ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎಂದು KERC ಸ್ಪಷ್ಟಪಡಿಸಿದೆ.
ಎಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಮೇಲೆ 1.46 ರೂ.ಹೆಚ್ಚು ಮಾಡುವಂತೆ ಎಸ್ಕಾಂಗಳು ಈ ಹಿಂದೆ ಬೇಡಿಕೆ ಸಲ್ಲಿಸಿದ್ದವು. ಹೊಸ ದರ ಜಾರಿ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತಿ ತಿಂಗಳ ಬಿಲ್ನಲ್ಲಿ ಶೇ 8.31. ರಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ.