37.3 C
Sullia
Sunday, March 8, 2026

ಬಳ್ಳಾರಿ ಬ್ಯಾನರ್ ಗಲಾಟೆ, ಗುಂಡೇಟಿಗೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ;ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ

ನ್ಯೂಸ್ ನಾಟೌಟ್ : ಬಳ್ಳಾರಿ ನಗರದಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿದೆ. ಈ ಘಟನೆಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ಆಗಿದ್ದು, ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾನೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸದ್ಯ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನ್ಯಾಯ ವೈದ್ಯಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಯಲಿದೆ. 1 ತಾಸಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ಭದ್ರತೆ ನೀಡಲಿದ್ದಾರೆ. ಇನ್ನು ಶವಾಗಾರದ ಎದುರು ಮೃತನ ಕುಟುಂಬಸ್ಥರು ಜಮಾಯಿಸಿದ್ದಾರೆ. 

ಘಟನೆ ಕುರಿತು ಗೃಹಸಚಿವ ಪರಮೇಶ್ವರ್​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬ್ಯಾನರ್​ ಅಳವಡಿಕೆ ವೇಳೆ ಕಿತ್ತಾಡಿಕೊಂಡಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ಮೇಲೆ ಬ್ರೂಸ್‌ಪೇಟೆ ಠಾಣೆಯಲ್ಲಿ FIR ದಾಖಲಾಗಿದೆ. ಶಾಸಕ ಜನಾರ್ದನ​ ರೆಡ್ಡಿ, ಶ್ರೀರಾಮುಲು, ಸೋಮಶೇಖರ್​ ರೆಡ್ಡಿ ಹಾಗೂ ದಮ್ಮೂರು ಶೇಖರ್​ ಸೇರಿ ಒಟ್ಟು 11 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಗಲಾಟೆಯಲ್ಲಿ ಶಾಸಕ ಜನಾರ್ದನ್​ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಪರಸ್ಪರ ಕಲ್ಲು ತುರಾಟ ಮಾಡಿದ್ದಾರೆ. ಈ ಗಲಾಟೆ ಜೋರಾಗುತ್ತಿದ್ದಂತೆ ಸತೀಶ್​​ ರೆಡ್ಡಿ ಅವ್ರ ಖಾಸಗಿ ಗನ್ ಮ್ಯಾನ್‌ಗಳು ​ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ..

ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ (Ballari Violence) ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles