ನ್ಯೂಸ್ ನಾಟೌಟ್ : ಮನೆ ಮುಂದೆ ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚುವುದು, ಕಲ್ಲು ಹೊಡೆದು ಹಾನಿ ಮಾಡಿರುವ ಪ್ರಕರಣಗಳು ವರದಿಯಾಗುತ್ತಲೇ ಇದೆ. ಅಂತಹದ್ದೆ ಪ್ರಕರಣ ಇದೀಗ ದೆಹಲಿಯಲ್ಲಿ ನಡೆದಿದ್ದು, ಮಹಿಳೆಯೊಬ್ಬರು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಈ ವೀಡಿಯೊ ಸೊಶೀಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಇನ್ನು ಬೈಕ್‌ಗೆ ಬೆಂಕಿ ಹಚ್ಚಿದ ಮಹಿಳೆ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾಳೆ. ಆದರೆ ನಂತರ ಮತ್ತೊಂದು ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸುವಾಗ ಸ್ಥಳೀಯರು ಆಕೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.