ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ಮುಂದುವರಿದಿದೆ.ಇದೀಗ ಬಿಜೆಪಿ ಸೋಲಿಗೆ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯ ಮಂತ್ರಿ ಡಿವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರಣವೆಂದು ಹೇಳಲಾದ ಬ್ಯಾನರ್ ವೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಕಂಡು ಬಂದಿದ್ದು ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ. ಬ್ಯಾನರ್ ನಲ್ಲಿ ನೊಂದ ಹಿಂದೂ ಕಾರ್ಯಕರ್ತರು ಎಂದು ಬರೆಯಲಾಗಿದೆ.
ಬಿಜೆಪಿ ನಾಯಕ, ಮಾಜಿ ಮುಖ್ಯ ಮಂತ್ರಿ ಡಿವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ವಿರುದ್ದ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಇದೀಗ ಪುತ್ತೂರಿನಲ್ಲಿಯೂ ಇವರಿಬ್ಬರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.
ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.