ನ್ಯೂಸ್ ನಾಟೌಟ್ : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಮುಖಂಡ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಚಪ್ಪಲಿ ಹಾರ ಹಾಕಿ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನರಿಮೊಗರು ಸಮೀಪದ ವಿಶ್ವನಾಥ್ ಮತ್ತು ಮಾಧವ ಎಂಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.