ನ್ಯೂಸ್ ನಾಟೌಟ್ : ನಿನ್ನೆಯಷ್ಟೇ ವ್ಯಕ್ತಿಯೊಬ್ಬ ಬಿಜೆಪಿಗೆ ಮತ ಹಾಕಿದ್ದಕ್ಕೆ ಯುವಕರು ನನ್ನ ಮೇಲೆ ಹಲ್ಲೆ ಮಾಡಿ ಆಟೋವನ್ನು ಪುಡಿಗೈದಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ಅವರ ಎದುರು ಗೋಳಾಡಿದ್ದರು. ಮಾತ್ರವಲ್ಲ ಎಸ್ಪಿ ಕಚೇರಿ ಬಳಿ ದೂರು ಹೇಳಿದ ವಿಡಿಯೋ ಕೂಡ ವೈರಲ್ ಆಗಿತ್ತು.ಇದೀಗ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ.
ಇದೀಗ ಹರೀಶ್ ರಾವ್ ಎಂಬ ವ್ಯಕ್ತಿ ಬಿಜೆಪಿಗೆ ಮತನೀಡಿದ್ದಕ್ಕೆ ದಾಳಿಯಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ನಾನು ಮುಸ್ಲಿಮ್ ಸ್ನೇಹಿತರು ಒಟ್ಟಿಗೆ ಮದ್ಯಪಾನ ಮಾಡಿದ್ದೆವು.ಅಲ್ಲಿ ಜಗಳವಾಗಿ ಆಗ ಆಟೋ ಟಾಪ್, ಗ್ಲಾಸ್ ಒಡೆದು ಹೋಗಿದೆ. ಅದಕ್ಕೆ ದೂರು ಕೊಡಲು ಎಸ್ಪಿ ಕಚೇರಿಗೆ ಹೋಗಿದ್ದೆ ಎಂದು ಹೇಳಿದ್ದಾನೆ.ನಾನು ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಹೊಡೆದರು ಎಂದು ಹೇಳಿಲ್ಲ.ನನ್ನ ಬಳಿ ಇದ್ದ ಅಮೀರ್ ಆ ತರಹ ಹೇಳಿದ, ನನ್ನ ತಪ್ಪಿಲ್ಲ. ಈಶ್ವರಪ್ಪ ಅವರು ದುಡ್ಡು ಕೊಟ್ಟರು.ಆದರೆ ಅದು ಎಷ್ಟಿತ್ತು ಎಂದು ನನಗೆ ಗೊತ್ತಿಲ್ಲ. ನಾನು ನಶೆಯಲ್ಲಿದ್ದೆ ಅದನ್ನು ಯಾರೋ ಜೇಬಿನಿಂದ ಎತ್ತಿಕೊಂಡು ಹೋಗಿದ್ದಾರೆ. ಕುಡಿದ ಮತ್ತಿನಲ್ಲಿ ಆದ ಜಗಳಕ್ಕೆ ಆಟೋ ಹಾನಿಯಾಗಿದ್ದು, ಎಲ್ಲರೂ ಬಾಲ್ಯ ಸ್ನೇಹಿತರು ಎಂದು ಸ್ಪಷ್ಟಪಡಿಸಿದ್ದಾರೆ.
ಹರೀಶ್ ರಾವ್ ಎಂಬ ಚಾಲಕ ತನ್ನ ಆಟೋ ಜೊತೆ ಎಸ್ಪಿ ಕಚೇರಿಗೆ ಬಂದಿದ್ದರು.ಎಸ್ಪಿ ಕಚೇರಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರು ಸಿಕ್ಕಾಗ ಹರೀಶ್ ರಾವ್ ಬಿಜೆಪಿಗೆ ಮತ ನೀಡಿದ್ದಕ್ಕೆ ನನ್ನ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.ರಿಕ್ಷಾ ತೋರಿಸಿ ಕಣ್ಣೀರಿಟ್ಟಾಗ ಈಶ್ವರಪ್ಪ ಸ್ವಲ್ಪ ಹಣವನ್ನು ಕೂಡ ತೆಗೆದು ಕೊಟ್ಟಿದ್ದರು.ಅಲ್ಲದೆ ಸೂಕ್ತ ತನಿಖೆ ನಡೆಸುವಂತೆ ಎಸ್ಪಿಗೆ ತಿಳಿಸುವುದಾಗಿ ಹೇಳಿದ್ದರು.ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಘಟನೆ ವಿರುದ್ಧ ಆಕ್ರೋಶ ಉಂಟಾಗಿತ್ತು.ಇದೀಗ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದ್ದು ಆಶ್ಚರ್ಯವೆಂಬಂತಿದೆ.