ನ್ಯೂಸ್ ನಾಟೌಟ್ :ಯುವತಿಯೋರ್ವಳನ್ನು ಕೊಲೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ಘಟನೆ ಕೇರಳ ಕಾಞ೦ಗಾಡ್ ನಲ್ಲಿ ನಡೆದಿದೆ.ದೇವಿಕಾ(34) ಕೊಲೆಯಾದ ಯುವತಿ.ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.ಸತೀಶ್ ಭಾಸ್ಕರ್(36) ಠಾಣೆಗೆ ಶರಣಾದ ಆರೋಪಿ.
ಬ್ಯೂಟಿಶಿಯನ್ ಆಗಿದ್ದ ಉದುಮ ಮಾಂಗಾಡ್ ನ ಬೋವಿಕ್ಕಾನ ದ ದೇವಿಕಾ ಮತ್ತು ಈತ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.ಆದರೆ ಇತ್ತೀಚೆಗೆ ಮನಸ್ತಾಪ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಇಬ್ಬರ ಕೌಟುಂಬದವರ ನಡುವೆ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು.
ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದು, ನಿನ್ನೆ ಮಧ್ಯಾಹ್ನ ದೇವಿಕಾಳನ್ನು ವಸತಿಗೃಹಕ್ಕೆ ಕರೆಸಿಕೊಂಡು ಕೊಲೆ ಮಾಡಿದ್ದಾನೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.