ನ್ಯೂಸ್ ನಾಟೌಟ್: ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬುಧವಾರ ವರದಿ ತಿಳಿಸಿದೆ.
ಬೆಳಗ್ಗೆ 11.30ರ ಸುಮಾರಿಗೆ ಮಹಿಳೆ ಪ್ಲಾಟ್ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು ಎಂದು ಹೇಳಲಾಗಿದೆ, ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು ಆ ವೇಳೆ ರೈಲು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ವರದಿಗಳು ತಿಳಿಸಿವೆ.
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಯೋ ಎಂಬುದು ದೃಢಪಟ್ಟಿಲ್ಲ ಎನ್ನಲಾಗಿದೆ.