21.6 C
Sullia
Sunday, March 8, 2026

ಸುಳ್ಯ: ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು, ಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆ

ನ್ಯೂಸ್ ನಾಟೌಟ್ : ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವುದು ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತರು ಎಂದು ಗುರುತಿಸಲಾಗಿದೆ. ಹರೀಶ್ ಅವರು ತನ್ನ ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದರು. ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ, ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ವೇಳೆ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಮನೆ ಸಮೀಪದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. 

Related Articles

LEAVE A REPLY

Please enter your comment!
Please enter your name here

Latest Articles