ಸುಳ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸುವ ಸಲುವಾಗಿ ಅಕ್ಟೋಬರ್ 11 ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಗೂನಡ್ಕದಿಂದ ಕಲ್ಲುಗುಂಡಿಯವರೆಗೆ ಜಾಗೃತಿ ಜಾಥಾ ಮತ್ತು ಕಾರ್ಯಾಗಾರ ನಡೆಯಲಿದೆ. ಮಹಿಳಾ ದೌರ್ಜನ್ಯ ಮುಕ್ತಿ ಮತ್ತು ಮಕ್ಕಳ ರಕ್ಷಣೆ ಘೋಷಣೆ ಬಗೆಗಿನ ಜಾಗೃತಿ ಜಾಥಾ ಹಾಗೂ ಕಾರ್ಯಾಗಾರ ಇದಾಗಿದೆ. ಬೆಳಗ್ಗೆ 11.30 ಕ್ಕೆ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹುಲ್ ಹಮೀದ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿರುವ ಯೋಗೀಶ್ ಮಲ್ಲಿಗೆಮಾಡು ಇವರು ಮಹಿಳಾ ಮತ್ತು ಮಕ್ಕಳ ರಕ್ಷಣೆ ಹಾಗೂ ಪರಿಶಿಷ್ಟ ಜಾತಿ/ಪಂಗಡಗಳ ದೌರ್ಜನ್ಯ ತಡೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- +91 73497 60202
- [email protected]
- November 25, 2024 8:55 PM