ನ್ಯೂಸ್ ನಾಟೌಟ್ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರಿದ್ದ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ವಿವಾದ ಸ್ಫೋಟಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲೂ ಕೆಲವು ಪೋಸ್ಟರ್ಗಳು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಈಗ ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಅಪ್ಪಿತಪ್ಪಿ ಜಾಲತಾಣದಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ,ಪೋಸ್ಟರ್ಗಳನ್ನು ಹಾಕಿದ್ರೆ ಅಂಥಹವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಎಚ್ಚರಿಕೆ ನೀಡಿದ್ದಾರೆ.
ಚುನಾವಣೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್ ಹಾಕಿ ಜನರಲ್ಲಿ ಬೇಧ-ಭಾವ ಮತ್ತು ಅಸಭ್ಯ ಚಿತ್ರಗಳ ಬರವಣಿಗೆ, ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ಇದು ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡಿದೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮಾಡಿದವರ ಮತ್ತು ಫಾರ್ವರ್ಡ್ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ರಚಿಸಿದ್ದಾರೆ. ಈ ಮೂಲಕ ಪೋಸ್ಟ್ ಹಾಕಿದವರ ಲೊಕೇಶನ್ ಕಂಡು ಹಿಡಿದು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.