ನ್ಯೂಸ್ ನಾಟೌಟ್: ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿಗೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ನೂತನ ಸಿಎಂ ಮತ್ತು ಡಿಸಿಎಂಗೆ ರಾಜ್ಯಪಾಲ ಠಾವರ್ಚಂದ ಗೆಹ್ಲೋತ್ ಪ್ರತಿಜ್ಞಾವಿಧಿ ಬೋಧಿಸಿದರು. ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಮತ್ತು ಡಿ.ಕೆ.ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಮಾಡಿದರು.
ಡಾ.ಜಿ. ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ, ಕೆ.ಎಚ್. ಮುನಿಯಪ್ಪ , ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ರಾಮಲಿಂಗ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಜಮೀರ್ ಅಹ್ಮಮದ್ ಖಾನ್ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋತ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಮ್ಮುಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ, ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ, ಅಖಿಲೇಶ್ ಯಾದವ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಜಾರ್ಖಂಡ್ ಸಿಎಂ ಹೇಮಂತ್ ಸೂರೇನ್, ಫಾರೂಕ್ ಅಬ್ದುಲ್ಲಾ, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ನಾಥ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನಟರಾದ ಕಮಲ್ ಹಾಸನ್, ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿಯರಾದ ಉಮಾಶ್ರೀ, ರಮ್ಯಾ, ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು.