ನ್ಯೂಸ್ನಾಟೌಟ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಕಾಫಿ ತೋಟವೊಂದರಲ್ಲಿ ಮಹಿಳೆಯೊಬ್ಬರ ಕಾಲು ಪತ್ತೆಯಾಗಿದೆ.! ಇದು ಸ್ಥಳೀಯರಲ್ಲಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಕಾಲು ಪತ್ತೆಯಾಗಿರುವ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿರುವ ಕಾಫಿ ತೋಟಕ್ಕೆ ಎಸ್ಪಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇ 16ರಂದು ಚೋಂದು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಇದೀಗ ನಾಲ್ಕು ದಿನಗಳ ಬಳಿಕ ಕಾಫಿ ತೋಟದಲ್ಲಿ ಮಹಿಳೆಯ ಕಾಲು ಹಾಗೂ ಬಟ್ಟೆ ಪತ್ತೆಯಾಗಿದೆ. ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆ ಚುರುಕುಗೊಳಿಸಿದ್ದಾರೆ.
ಕಾಡು ಪ್ರಾಣಿಗಳು ಮಹಿಳೆಯನ್ನು ತಿಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಮೃತ ಮಹಿಳೆಯ ಪತಿ ಅಪ್ಪಿ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಹಿಳೆ ಚೋಂದು ಹತ್ಯೆಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.