ನ್ಯೂಸ್ ನಾಟೌಟ್ : ಕಾಂಗ್ರೆಸ್ ಕೊಟ್ಟಿರುವ ೫ ಗ್ಯಾರಂಟಿಗಳ ಫಲಾನುಭವಿಗಳಾಗಲು ಜನ ಭಾರಿ ಉತ್ಸುಕರಾಗಿದ್ದು,ಇದೀಗ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಕೊಡುಗೆಗಳನ್ನ ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆಗಳಿರುವುದರಿಂದ ಜನರ ಚಿತ್ತ ಆಹಾರ ಇಲಾಖೆಯತ್ತ ಹೊರಟಿದೆ.ಆದರೆ ಬಿಪಿಎಲ್ ಕಾರ್ಡ್ಗೆ ಮುಗಿಬಿದ್ದ ಜನರಿಗೆ ಇದೀಗ ಅರ್ಜಿ ಸ್ವೀಕಾರವನ್ನೇ ಅಹಾರ ಇಲಾಖೆ ಸ್ಥಗಿತಗೊಳಿಸಿದೆ!
ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡುವ ನಿರ್ಧಾರಗಳನ್ನು ಕೈಗೊಂಡು ಅಧಿಕೃತ ಆದೇಶಗಳನ್ನ ಹೊರಡಿಸಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತ್ರ, ಈ ಯೋಜನೆಗಳ ಲಾಭ ಸಿಗುವುದಿಲ್ಲ. ನಿಜಕ್ಕೂ ಬಡವರಿಗೆ, ಅರ್ಹರಿಗೆ ಮಾತ್ರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಎಲ್ಲಾ ಬೆಳವಣಿಗೆ ಹಿನ್ನಲೆ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಮೊರೆ ಹೋದರು.
ahar.kar.nic.in ವೆಬ್ ಸೈಟ್ ಓಪನ್ ಮಾಡಲೆತ್ನಿಸಿದರೆ, ಇನ್ನೂ ಕೆಲವರು ಸಮೀಪದ ಸೈಬರ್ ಸೆಂಟರ್ ಗಳಿಗೆ ಹೋಗಿ ಬಿಪಿಎಲ್ ಕಾರ್ಡ್ ಗಳನ್ನೂ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೆಚ್ಚಿನ ಜನರು ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ಇಲಾಖೆ ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರವನ್ನ ಸ್ಥಗಿತಗೊಳಿಸಿದೆ ಎಂದು ತಮ್ಮ ವೆಬ್ ಸೈಟ್ ನಲ್ಲೆ ಸ್ಪಷ್ಟವಾಗಿ ನಮೂದಿಸಿಬಿಟ್ಟಿದ್ದಾರೆ.
ಇನ್ನೂ ಈ ಸಮಸ್ಯೆ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳನ್ನು ಕೇಳಿದ್ರೆ.ಬಿಪಿಎಲ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಆಹಾರ ಇಲಾಖೆಯಲ್ಲಿ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಾರ್ಡ್ ತಿದ್ದುಪಡಿಗೆ ಸರ್ವರ್ ಒಪನ್ ಇತ್ತು.ಮಾಚ್ 9ರಿಂದ ನೀತಿ ಸಂಹಿತೆ ಜಾರಿಯಾಗುವ ವರೆಗೂ GSC ಅಪ್ಲಿಕೇಶನ್ ಹಾಕುವುದಕ್ಕೆ ಅವಕಾಶ ನೀಡಲಾಗಿತ್ತು. ಮೇ ತಿಂಗಳಲ್ಲೂ 17 ಹಾಗೂ 18ರ ವರೆಗೂ ಸರ್ವರ್ ಒಪನ್ ಇತ್ತು. ಇದೀಗ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ಅದೇಶ ಬರುವವರೆಗೂ ಜನರು ಕಾಯಲೇಬೇಕು ಎಂದು ಇಲಾಖೆಯ ಆಧಿಕಾರಿಗಳು ತಿಳಿಸಿದ್ದಾರೆ.