27.7 C
Sullia
Sunday, March 8, 2026

ಸುಳ್ಯ: ಶ್ರೀ ಚೆನ್ನಕೇಶವ ದೇವರಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಡಾ. ಕೆವಿ. ಚಿದಾನಂದ ನೇತೃತ್ವದಲ್ಲಿ ಬೃಹತ್ ಹೊರೆಕಾಣಿಕೆ ಸಮರ್ಪಣೆ

ನ್ಯೂಸ್ ನಾಟೌಟ್ : ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರ ನೇತೃತ್ವದಲ್ಲಿ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳಾದ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆವಿಜಿ ಕಾನೂನು ಮಹಾವಿದ್ಯಾಲಯ, ನೆಹರೂ ಮೆಮೋರಿಯಲ್ ಕಾಲೇಜು, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್, ನರ್ಸಿಂಗ್ ಸೈನ್ಸಸ್, ಫಿಸಿಯೋತೆರಪಿ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ ಅದ್ಧೂರಿ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್(ರಿ.) ಸುಳ್ಯ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಐಶ್ವರ್ಯ ಕೆ. ಸಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ ಸೇರಿದಂತೆ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ವಿಭಾಗ ಮುಖ್ಯಸ್ಥರು, ಪ್ರಾಧ್ಯಪಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles