ನ್ಯೂಸ್ ನಾಟೌಟ್ : ‘ನನಗೇನೂ ವಿರೋಧ ಪಕ್ಷದ ನಾಯಕನಾಗುವ ಮನಸ್ಸು ಇಲ್ಲ. ಒಂದು ವೇಳೆ ಆದರೆ ಅದರ ಮಜಾನೇ ಬೇರೆ. ಸರ್ಕಾರಕ್ಕೆ ಸರಿಯಾಗಿ ಉತ್ತರ ನೀಡುತ್ತೇನೆ. ಕಾಂಗ್ರೆಸ್ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೇ… ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಕಾಂಗ್ರೆಸ್ನವರು ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ನನ್ನ ಮೇಲೆ ಯಾವುದೇ ಆರೊಪವಿಲ್ಲ. ನನ್ನನ್ನು ಬ್ಲ್ಯಾಕ್ಮೇಲ್ ಮಾಡಲು ಅವರಿಂದ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
‘ಯು.ಟಿ.ಖಾದರ್ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಸಂತೋಷ. ಆದರೆ ಅವರ ಕನ್ನಡವೇ ಸ್ಪಷ್ಟವಾಗಿಲ್ಲ.ಅದೇ ಬೇಜಾರಿನ ಸಂಗತಿ ಎಂದು ಹೇಳಿದರು. ಪ್ರಮಾಣವಚನ ಸ್ವೀಕಾರ ಸಮಯದಲ್ಲಿಯೂ ಕೆಲವರು ಇಂಗ್ಲೀಷಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಆಗ ಕನ್ನಡಪರ ಹೋರಾಟಗಾರರು ಎಲ್ಲಿಗೆ ಹೋಗಿದ್ದಾರೆ ಎಂದು ಹೇಳಿದರಲ್ಲದೇ ಬಹುಶಃ ಅವರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಯಲ್ಲಿ ಮಲಗಿರಬೇಕು’ ಎಂದು ವ್ಯಂಗ್ಯವಾಡಿದರು.