ನ್ಯೂಸ್ ನಾಟೌಟ್ : ಮಳೆಗಾಲದಲ್ಲಿ ಗಾಳಿ,ಸಿಡಿಲು,ಮಳೆಗೆ ಕರೆಂಟ್ ಕಂಬಗಳು ನೆಲಕ್ಕುರುಳಿದರೆ ೨೪ ಗಂಟೆಯೊಳಗೆ ಅದು ದುರಸ್ತಿಯಾಗಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿದ್ಯುತ್ ಕಂಬಗಳು ಎಷ್ಟೇ ಉರುಳಿದರೂ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಯಾಗದೇ ಅದನ್ನು ಕೂಡಲೇ ಸರಿಪಡಿಸಬೇಕೆಂದು ತಿಳಿಸಿದ್ದಾರೆ.
ವಿದ್ಯುತ್ ತಂತಿಗಳು ಅಪಾಯಕಾರಿ ಸ್ಥಿತಿಯಲ್ಲಿದ್ದರೆ ಅದನ್ನು ತೆರವು ಮಾಡಬೇಕು ಅಥವಾ ಬದಲಿ ವ್ಯವಸ್ಥೆ ಮಾಡಬೇಕೆಂದರಲ್ಲದೇ ಶಾಲಾ ಕಾಲೇಜು ಪರಿಸರದಲ್ಲಿರುವ ವಿದ್ಯುತ್ ಕಂಬ, ವಿದ್ಯುತ್ ತಂತಿ ಬಗ್ಗೆ ವಿಶೇಷ ಗಮನಹರಿಸಬೇಕೆಂದು ಹೇಳಿದ್ರು. ಎಲ್ಲಾ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು, ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲು ನಾನು ಸಿದ್ಧನಾಗಿದ್ದೇನೆ ಎಂದು ಶಾಸಕರು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.