ನ್ಯೂಸ್ ನಾಟೌಟ್ : ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಹರಿಬಿಟ್ಟ ಬೆಚ್ಚಿಬೀಳಿಸುವ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಬಾಲಕಿ 17 ವರ್ಷವಾಗಿದ್ದು, ವಾರಣಾಸಿಯ ದಶಾಶ್ವಮೇಘ ಘಾಟ್ನಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ನಾಲ್ವರು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ.
ಆಕೆ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿದ್ದಲ್ಲದೇ ವಿಡಿಯೋ ಮಾಡಿ ಹರಿಬಿಟ್ಟಿದ್ದ ಅಮಾನುಷ ಘಟನೆ ವರದಿಯಾಗಿದೆ.ಮೇ 19ರಂದು ನಡೆದ ಈ ಭೀಕರ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ಬಾಲಕಿಯ ಸಂಬಂಧಿಕರಿಗೆ ಹಾಗೂ ಕುಟುಂಬದವರಿಗೆ ಬಾಲಕಿಯ ಮೇಲಿನ ದೌರ್ಜನ್ಯದ ಬಗ್ಗೆ ತಿಳಿದು ಬಂದಿದೆ. ಈ ಕುರಿತು ಎಫ್ಐಆರ್ ದಾಖಲಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.