ನ್ಯೂಸ್ ನಾಟೌಟ್: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 1.69 ಕೋಟಿ ರೂಪಾಯಿ ಮೌಲ್ಯದ ವಜ್ರದ ಹರಳುಗಳನ್ನು ವಶಕ್ಕೆ ಪಡೆದು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡು ನಿವಾಸಿಯೋರ್ವನನ್ನು ಬಂಧಿಸಲಾಗಿದ್ದು, ಈತ ಒಳಉಡುಪಿನಲ್ಲಿ 13 ಪೌಚ್ಗಳಲ್ಲಿ ವಜ್ರದ ಹರಳುಗಳನ್ನು ಅಡಗಿಸಿಟ್ಟಿದ್ದು, ಅಕ್ರಮವಾಗಿ ವಿದೇಶಕ್ಕೆ ಸಾಗಿಸಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ.
ವಿಮಾನ ನಿಲ್ದಾಣದಲ್ಲಿ ಆತನ ಅನುಮಾನಾಸ್ಪದ ವರ್ತನೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿದೆ ಬಂದಿದೆ. ಸಿಐಎಸ್ಎಫ್ ಅಧಿಕಾರಿಗಳು ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.