ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಎಲ್ಲ ಮಹಿಳೆಯರು ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಚುನಾವಣೆಗೆ ಮೊದಲು ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ದಾರರು ಎಂದು ತಿಳಿಸಿರಲಿಲ್ಲ. ಆದ್ದರಿಂದ ಎಲ್ಲಾ ಮಹಿಳೆಯರಿಗೆ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.
ಇಂದಿನ ಸಭೆಯಲ್ಲಿ ಸಾರಿಗೆ ನಿಗಮಗಳ ಎಂಡಿಗಳ ಜತೆ ಉಚಿತ ಪ್ರಯಾಣದಿಂದ ಆಗುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ್ದೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮವಾಗಿ ವರದಿ ಸಲ್ಲಿಸಲಿದ್ದಾರೆ. ಬಳಿಕ ಸಿಎಂ ಕ್ರಮಕೈಗೊಳ್ಳಲಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.