ನ್ಯೂಸ್ ನಾಟೌಟ್ : ತಾನೇ ಸೆರೆ ಹಿಡಿದ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ (51) ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಖ್ಯಾತಿ ಪಡೆದಿದ್ದ ಸ್ನೇಕ್ ನರೇಶ್ ಅವರು ಬೆಳಗ್ಗೆ ನಾಗರಹಾವೊಂದನ್ನು ಹಿಡಿದುಕೊಂಡು ಮನೆಗೆ ಬಂದಿದ್ದರು. ಆದರೆ ಮಧ್ಯಾಹ್ನ ಮತ್ತೊಂದು ಹಾವು ಹಿಡಿಯಲು ಕರೆ ಬಂದಿತ್ತು. ಈ ವೇಳೆ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ್ದು, ದುರಾದೃಷ್ಟವಶಾತ್ ನಾಗರಹಾವು ಕಚ್ಚಿದೆ.
ಕೂಡಲೇ ನರೇಶ್ ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಾವಿರಾರು ಹಾವುಗಳನ್ನ ಸೆರೆ ಹಿಡಿದಿದ್ದ ಸ್ನೇಕ್ ನರೇಶ್ ಅವರು 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಅಂತಹ ಸ್ನೇಕ್ ನರೇಶ್ ತಮ್ಮ ಕಾಯಕದಿಂದಲೇ ಅಂತ್ಯ ಕಂಡಿದ್ದಾರೆ.