ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗ್ ನ ಮೇಲೆ NIA ಇಂದು ದಾಳಿ ನಡೆಸಿದ್ದು ಮಹತ್ವದ ಮಾಹಿತಿಯನ್ನು ಕಲೆ ಹಾಕಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.
ದ.ಕ ಜಿಲ್ಲೆಯ 16 ಕಡೆ NIA ದಾಳಿ ನಡೆಸಿದೆ. ಪುತ್ತೂರಿನ ಕೂರ್ನಡ್ಕ, ತಾರಿಪಡ್ಪು, ಕುಂಬ್ರ ಭಾಗದ ನಾಲ್ವರನ್ನು ಎನ್ ಐಎ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾ್ಗುತ್ತಿದೆ. ಬಿಹಾರದಲ್ಲಿ 2021 ಜುಲೈ 12ರಂದು ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.