ನ್ಯೂಸ್ ನಾಟೌಟ್ : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಲಂಕಾರು ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಮಹಿಳೆ ಗಾಯಗೊಂಡಿದ್ದರು.
ಮೇ.25ರಂದು ಗೋಳಿತ್ತಡಿ ಶಾರದಾ ನಗರದ ಗುಲಾಬಿ ಎಂಬ ಮಹಿಳೆ ಚಲಿಸುತ್ತಿದ್ದ ಬಸ್ಸಿನಿಂದ ಆಲಂಕಾರು ಎಂಬಲ್ಲಿ ಮಾರ್ಗಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೇ.29ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.