ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಬುಧವಾರದಿಂದ ಶಾಲಾ ಕಾಲೇಜು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಳೆಯ ಬಸ್ ಪಾಸನ್ನು ಜೂನ್ 15 ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ.
ಮೇ 31 ರಂದು ರಾಜ್ಯದಲ್ಲಿ ಪ್ರಾಥಮಿಕ -ಫೌಡ ಶಾಲೆ, ಕಾಲೇಜುಗಳು ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ಬಸ್ ಪಾಸಿನ ಅವಧಿಯನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ. ಜೂ. 16ರ ಬಳಿಕ ಹೊಸ ಪಾಸ್ ತೆಗೆದುಕೊಳ್ಳಬೇಕಾಗಿ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.