ನ್ಯೂಸ್ ನಾಟೌಟ್ : ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತರುವುದಕ್ಕೆ ಮುಂದಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ನೀಡುವುದರ ಕುರಿತು ಚರ್ಚೆ ನಡೆಸಲಾಯಿತು. ಜುಲೈ 1 ರಿಂದ ವಿದ್ಯುತ್ ಬಿಲ್ ಫ್ರೀ ಅನ್ನುವುದನ್ನು ಘೋಷಿಸಲಾಯಿತು.
ಅಂದರೆ ಆಗಸ್ಟ್ ನಿಂದ 200 ಯೂನಿಟ್ ವರೆಗೆ ಬಿಲ್ ಕಟ್ಟಬೇಕಿಲ್ಲ ಅನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ ಕುರಿತು ಭಾರಿ ಚರ್ಚೆಯಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಲವಾರು ಗೊಂದಲಗಳು ಕೂಡ ಏರ್ಪಟ್ಟಿದ್ದವು. ಇದೀಗ ಸಿಎಂ ಸಿದ್ದರಾಮಯ್ಯ ಗ್ಯಾರಂಟಿಯ ಮೊದಲ ಭರವಸೆಯನ್ನು ಈಡೇರಿಸಿದಂತಾಗಿದೆ.