ಕರಾವಳಿ

ಮುಸ್ಲಿಂಮರ ವಿರುದ್ಧ ನಿರಂತರ ದೌರ್ಜನ್ಯ: ಟಿಎಂ ಶಹೀದ್

244
Spread the love

ಸುಳ್ಯ : ಮುಸ್ಲಿಂರ ವಿರುದ್ದ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ  ಟಿ.ಎಂ ಶಹೀದ್ ಹೇಳಿದ್ದಾರೆ. ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ , ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ. ಸುಳ್ಯ ನಗರ ಪಂಚಾಯತ್ ಸದಸ್ಯ ಉಮರ್ ಕೆ.ಎಸ್ ಮಾತನಾಡಿದರು. ಕಾರ್ಯಕ್ರಮದಲ್ಲಿ SKSSF ಸುಳ್ಯ ವಲಯ ಕಾರ್ಯದರ್ಶಿ ಅಕ್ಬರ್ ಕರಾವಳಿ, ಮದ್ರಸ ಮೆನೇಜ್ಮೆಂಟ್ ಕೋಶಾಧಿಕಾರಿ ಹಮೀದ್ ಹಾಜಿ, ಶಂಸುಲ್ ಉಲಮಾ ಟ್ರಸ್ಟ್ ಮುಖಂಡರಾದ ಅಬೂಬಕ್ಕರ್ ಬೆಳ್ಳಾರೆ, ಅಬ್ದುಲ್ ಖಾದರ್ ಬಯಂಬಾಡಿ, ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಅಬ್ದುಲ್ ಕಾದರ್ ಫೈಝಿ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಹಾಜಿ ಇಬ್ರಾಹಿಂ ಮಂಡೆಕೋಲ್, ಅಡ್ವಕೇಟ್ ಫವಾಝ್, ಸುಳ್ಯ ವಿಖಾಯ ಚೇರ್ಮನ್ ಷರೀಫ್ ಅಜ್ಜಾವರ ಉಪಸ್ಥಿತರಿದ್ದರು.

See also  ದಕ್ಷಿಣ ಕನ್ನಡ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ನಿಧನ! ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಪ್ರತಿಭಾನ್ವಿತೆ!
  Ad Widget   Ad Widget   Ad Widget