ನ್ಯೂಸ್ ನಾಟೌಟ್: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳು ಕೈಗೊಳ್ಳುವ ಕಠಿಣ ಕ್ರಮಕ್ಕೆ ಹೆದರಿರುವ ಸರ್ಕಾರಿ ಸಿಬ್ಬಂದಿ ತಮ್ಮ ಬಳಿಯಿರುವ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.
ಕಳೆದ ಕೆಲವು ವಾರಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಹಲವು ಸರ್ಕಾರಿ ಸಿಬ್ಬಂದಿ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.
ರಾಜ್ಯದಾದ್ಯಂತ ಹಲವು ಸರ್ಕಾರಿ ಸಿಬ್ಬಂದಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆಂಬ ಆರೋಪಗಳು ಈ ಹಿಂದೆ ಕೇಳಿ ಬಂದಿತ್ತು.
ಇದೀಗ ಹೊಸ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸಂದರ್ಭದಲ್ಲಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ದಾಖಲೆಗಳನ್ನು ಪರಿಶೀಲಿಸಲು ಮುಂದಾಗಿದೆ. ಈ ವೇಳೆ ಸಿಕ್ಕಿ ಬೀಳುವ ಆತಂಕದಿಂದ ಸರ್ಕಾರಿ ಸಿಬ್ಬಂದಿ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಗುರುತಿನ ಚೀಟಿಯನ್ನು ಪರಿಶೀಲಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮುಂದಾಗಲಿದ್ದು, ಈ ಸಂದರ್ಭದಲ್ಲಿ ನಕಲಿ ಐಡಿಗಳನ್ನು ಗುರುತಿಸುವ ಸಾಧ್ಯತೆಯಿದೆ. ಈ ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ ಸರ್ಕಾರಿ ಸಿಬ್ಬಂದಿಗೆ ಎದುರಾಗಿದೆ.
ಒಂದು ವೇಳೆ ಸಿಕ್ಕಿಬಿದ್ದಿದ್ದೇ ಆದರೆ, ಕಾರ್ಡ್ ಹೊಂದಿರುವ ಸಮಯವನ್ನು ಅವಲಂಬಿಸಿ, ದಂಡ ಹಾಗೂ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಡ್ ಗಳನ್ನು ಮರಳಿಸುತ್ತಿದ್ದಾರೆಂದು ತಿಳಿದುಬಂದಿದೆ. ಕೊಪ್ಪಳ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಕಳೆದ ಒಂದು ತಿಂಗಳಲ್ಲಿ 22 ಸರ್ಕಾರಿ ನೌಕರರು, ನಾಲ್ವರು ಪೊಲೀಸ್ ಇಲಾಖೆಯವರು ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಿದ್ದಾರೆ. “ಸಮಯವನ್ನು ಅವಲಂಬಿಸಿ, ನಾವು ಅವರಿಗೆ 1,000 ಮತ್ತು 10,000 ರೂಗಳವರೆಗೆ ದಂಡ ವಿಧಿಸಿದ್ದೇವೆ. ಕಳೆದ ಆರು ತಿಂಗಳಲ್ಲಿ, ವಿವಿಧ ಸರ್ಕಾರಿ ನೌಕರರು ಮತ್ತು ವ್ಯಕ್ತಿಗಳಿಂದ 234 ಕಾರ್ಡ್ಗಳನ್ನು ಸ್ವೀಕರಿಸಲಾಗಿದೆ. ಇಲ್ಲಿಯವರೆಗೆ ರೂ. 7 ಲಕ್ಷದವರೆಗೆ ದಂಡ ವಸೂಲಿ ಮಡಾಲಾಗಿದೆ ಎಂದು ಹೇಳಿದ್ದಾರೆ.