ನ್ಯೂಸ್ ನಾಟೌಟ್: ಅಂಗಳದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಪುಟ್ಟ ಕಂದಮ್ಮವೊಂದು 300 ಅಡಿ ಆಳದ ಬೋರ್ವೆಲ್ಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಮುಂಗೋಲಿ ಗ್ರಾಮದಲ್ಲಿ ನಡೆದಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಎಸ್ಡಿಆರ್ಎಫ್, ಎನ್ಡಿಆರ್ಎಫ್, ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿದ್ದು, ಹಿರಿಯ ಅಧಿಕಾರಿಗಳ ಮೇಲುಸ್ತುವಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ. ಜೆಸಿಬಿ ಯಂತ್ರಗಳ ನೆರವಿನಿಂದ 300 ಅಡಿ ಆಳದ ಬಾವಿಯಿಂದ ಮಗುವನ್ನು ಹೊರತರುವ ಕಾರ್ಯ ಭರದಿಂದ ಸಾಗಿದೆ. ರಕ್ಷಣಾ ಕಾರ್ಯಕ್ಕೆ ಅನುಕೂಲವಾಗುವಂತೆ ಬೋರ್ವೆಲ್ ಪಕ್ಕದಲ್ಲಿ ಕಂದಕ ಕೊರೆಯಲಾಗುತ್ತಿದೆ. ಘಟನೆ ಸಂಭವಿಸಿ 12 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದಿರುವುದರಿಂದ, ಮಗುವಿನ ನಿಖರ ಚಲವಲನವನ್ನು ಸ್ಪಷ್ಟವಾಗಿ ಗಮನಿಸಲು ಸಾಧ್ಯವಾಗುತ್ತಿಲ್ಲ. ಕಲ್ಲು ಬಂಡೆಗಳು ಅಡ್ಡ ಬಂದಿರುವ ಕಾರಣ ಕಾರ್ಯಾಚರಣೆಗೆ ತೊಂದರೆಯಾಗುತ್ತಿದೆ ಎನ್ನುವ ಮಾಹಿತ ಲಭ್ಯವಾಗಿದೆ.