ನ್ಯೂಸ್ ನಾಟೌಟ್ : ಕಳೆದ ಎರಡು ವಾರಗಳ ಹಿಂದೆ ನಡೆದಿದ್ದ ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದ ಚಿಕ್ಕಮಂಗಳೂರು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಧರ್ಮಪಾಲಯ್ಯ (61) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೆ ಸ್ಟೆಷನ್ ಬಳಿ ವ್ಯಕ್ತಿ ಮೃತಪಟ್ಟಿದ್ದು, ಇವರು ಕಳಸ ತಾಲೂಕಿನ ಕಳಕೋಡು ಗ್ರಾಮದ ನಿವಾಸಿ ಎನ್ನಲಾಗಿದೆ.ರೈಲು ಅಪಘಾತವಾದ ಬಳಿಕ ಸುಮೇದ್ ಶಿಖರ್ಜಿಗೆ ತೆರೆಳಿದ್ದರು. ಇದೀಗ ಅಲ್ಲಿಂದ ಹಿಂದಿರುಗುವಾಗ ಹೃದಯಾಘಾತ ಸಂಭವಿಸಿದೆ. ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ನಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಯಾತ್ರಿಕರು ಮೃತ ದೇಹಕ್ಕಾಗಿ ಕಾಯುತ್ತಿದ್ದಾರೆ.ಜೂನ್ 2ರಂದು ಒಡಿಶಾದ ಬಾಲಾಸೋರ್ ರೈಲು ನಿಲ್ದಾಣದ ಸಮೀಪದಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಪಘಾತಕ್ಕೀಡಾದ ರೈಲಿನಲ್ಲಿ ಧರ್ಮಪಾಲಯ್ಯ ಅವರು ಕೂಡ ಪ್ರಯಾಣ ಮಾಡಿದ್ದರು. ಆದರೆ, ಅದೃಷ್ಟವಶಾತ್ ಅಪಘಾತದಿಂದ ಪಾರಾಗಿದ್ದರು. ಆದರೆ, ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹಂಗ ಬಜಾರ್ ಬಳಿ ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಪರಿಗಣಿಸಲಾಗಿದೆ. ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಅಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 12 ಬೋಗಿಗಳು ಹಳಿ ತಪ್ಪಿ ಪಕ್ಕದ ಟ್ರ್ಯಾಕ್ಗೆ ಉರುಳಿವೆ. ಅತ್ತ, ಯಶವಂತಪುರದಿಂದ ಹೌರಾಗೆ ಹೋಗುತ್ತಿದ್ದ ಇನ್ನೊಂದು ರೈಲು ಈ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಎರಡು ಪ್ಯಾಸೆಂಜರ್ ರೈಲುಗಳಿಗೆ ಬಹಳ ಹಾನಿಯಾಗಿತ್ತು.