ನ್ಯೂಸ್ ನಾಟೌಟ್: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವ ಸಾಧ್ಯತೆಯ ಬಗ್ಗೆ ಬಿಜೆಪಿ ಗೆ ಸುಳಿವು ಸಿಕ್ಕಿದೆಯಂತೆ, ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್ಲೈನ್ ಆರಂಭಿಸಿದೆ.
ಸ್ವತಃ ಈ ವಿಷಯವನ್ನು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ತೇಜಸ್ವಿ ಸೂರ್ಯ, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಮತ್ತು ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರಕೋಷ್ಠದ ಯೋಗೇಂದ್ರ ಮತ್ತು ಅವರ 100 ವಕೀಲರ ತಂಡ ಸಹಾಯವಾಣಿ ಆರಂಭಿಸಿದೆ. ಸದನದ ಒಳಗೆ ಹಾಗೂ ಸದನದ ಹೊರಗೆ ಇಂತಹ ದೌರ್ಜನ್ಯದ ವಿರುದ್ಧ ಹೋರಾಡಲು ಬಿಜೆಪಿ ತೀರ್ಮಾನಿಸಿದೆ ಎಂದು ತಿಳಿಸಿದರು. ಬಿಜೆಪಿ ಸಹಾಯವಾಣಿಯಿಂದ ತುರ್ತು ನೆರವು ಬೇಕಾಗಿರುವವರು 18003091907 ಸಂಖ್ಯೆಗೆ ಕರೆ ಮಾಡಿ ತಮ್ಮ ಕಷ್ಟವನ್ನು ಹೇಳಿಕೊಳ್ಳಬಹುದಾಗಿದೆ.