ನ್ಯೂಸ್ ನಾಟೌಟ್ : ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ವರದಿಯಾಗಿದೆ.
ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ತುಂಗಾ ನದಿಯಲ್ಲಿ ದುರ್ಘಟನೆ ಸಂಭವಿಸಿದೆ. ಮೃತರನ್ನು ಪುನೀತ್ (38) ಮತ್ತು ಬಾಲಾಜಿ (36) ಎಂದು ಗುರುತಿಸಲಾಗಿದೆ.
ಮೃತರಲ್ಲಿ ಒಬ್ಬರಾದ ಪುನೀತ್ ಎಂಬುವವರು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಬೋವಿನಡಿಯವರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದ್ದು ಮತ್ತೊಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.