ನ್ಯೂಸ್ ನಾಟೌಟ್ : ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ದ.ಕ ಸಂಸದ ನಳೀನ್ ಕುಮಾರ್ ಭವಿಷ್ಯ ನುಡಿದಿದ್ದಾರೆ.2023ರ ಅಂತ್ಯದ ವೇಳೆಗೆ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು ಸಿಎಂ ಅಧಿಕಾರ ಹಂಚಿಕೆ ವಿಚಾರವೇ ಕಾಂಗ್ರೆಸ್ಗೆ ಮುಳುವಾಗಲಿದೆ ಎಂದಿದ್ದಾರೆ. ಸಿದ್ದರಾಮಯ್ಯ ಬಣದವರು ಅವರೇ ಮುಂದಿನ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಲು ಆರಂಭಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಕಲಹದಿಂದ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.ಹೀಗಾಗಿ ಎಲ್ಲವೂ ಉಚಿತ ಎಂದು ಹೇಳಿ ಸರ್ಕಾರ ರಾಜ್ಯದ ಜನರನ್ನು ವಂಚಿಸುವ ಪ್ರಯತ್ನಗಳಾಗುತ್ತಿದೆ.ಜೂ.22 ರಂದು ರಾಜ್ಯ ಬಂದ್ ಗೆ ಕರೆ ನೀಡಿರುವ ಕೈಗಾರಿಕಾ ವಾಣಿಜ್ಯ ಮಂಡಳಿ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.