ನ್ಯೂಸ್ ನಾಟೌಟ್ : ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ಮಾಹಿತಿ ನೀಡಿದ್ದು, ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ.
“ಆರೋಪಿಯು ಸಂತ್ರಸ್ತೆಯ ಭೂಮಾಲಿಕನಾಗಿದ್ದು, 11 ವರ್ಷದ ಬಾಲಕಿಯ ಕುಟುಂಬ ಸದಸ್ಯರು ಮನೆಯಲ್ಲಿ ಇಲ್ಲದಿದ್ದಾಗ ಈ ಕೃತ್ಯ ಎಸಗಿದ್ದಾನೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ (ಎಸಿಪಿ) ಸೋನಾಕ್ಷಿ ಸಕ್ಸೇನಾ ಹೇಳಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಶನಿವಾರ ಬಾಲಕಿಯ ಕುಟುಂಬದವರು ಮನೆಯಲ್ಲಿ ಇಲ್ಲದಿದ್ದಾಗ ಆರೋಪಿಯು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.