ನ್ಯೂಸ್ ನಾಟೌಟ್: ಕಡಬ ಮಹಾಶಕ್ತಿಕೇಂದ್ರದ ವತಿಯಿಂದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾರ್ಯಕರ್ತರು ಹಗಲಿರುಳು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿರುವುದಕ್ಕೆ ಅಭೂತಪೂರ್ವ ಗೆಲುವು ಪಡೆಯಲು ಸಾಧ್ಯವಾಯಿತು. ಈ ಗೆಲುವಿಗೆ ಕಾರಣಿಭೂತರಾದ ದೇವದುರ್ಲಬ ಕಾರ್ಯಕರ್ತರಿಗೆ ಶಾಸಕಿ ಭಾಗೀರಥಿ(Bhagirathimurulya) ಮುರುಳ್ಯ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಪ್ರಮುಖರು, ಚುನಾಯಿತ ಜನಪ್ರತಿನಿಧಿಗಳು, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.