ನ್ಯೂಸ್ ನಾಟೌಟ್ ಪುತ್ತೂರು: ಪುತ್ತೂರಿನಲ್ಲಿ 15 ಎಕ್ರೆ ಜಾಗದಲ್ಲಿ 60 ಕೋಟಿ ರೂ. ಹಾಲು ಪ್ಯಾಕಿಂಗ್ ಘಟಕ ನಿರ್ಮಾಣವಾಗಲಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಜಾಗ ಗುರುತಿಸಲಾಗಿದ್ದು, ಜಾಗ ಪರಿಶೀಲಿಸುವಂತೆ ಒಕ್ಕೂಟಕ್ಕೆ ಸೂಚನೆ ನೀಡಲಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿನಲ್ಲಿ ಮಂಗಳವಾರ ದ.ಕ. ಜಿಲ್ಲಾ ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ದ.ಕ. ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ (ಮಿನಿ ಡೈರಿ) ನಿರ್ಮಾಣವಾಗಲಿದೆ. ಘಟಕ ಆರಂಭವಾದಲ್ಲಿ ಪುತ್ತೂರಿನ ಸಾವಿರಾರು ಜನರಿಗೆ ಉದ್ಯೋಗ ಲಭಿಸಲಿದೆ. ಪುತ್ತೂರಿನಲ್ಲಿ ವಿವಿಧ ಕೈಗಾರಿಕಾ ಘಟಕ ಪ್ರಾರಂಭಿಸುವ ಯೋಚನೆಯಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗದ ಜತೆಗೆ ಪುತ್ತೂರಿನ ಅಭಿವೃದ್ಧಿಗೂ ಪೂರಕವಾಗುತ್ತದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಸಭೆಯಲ್ಲಿ ಸಹಾಯಕ ಕಮಿಷನರ್ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ನಿರ್ದೇಶಕ ನಾರಾಯಣ ಪ್ರಕಾಶ್, ಸುಧಾಕರ್ ರೈ, ಮ್ಯಾನೇಜರ್ ರವಿರಾಜ್ ಉಡುಪ, ಸಹಾಯಕ ವ್ಯವಸ್ಥಾಪಕರಾದ ಡಾ. ಸತೀಶ್ ಮತ್ತಿತರರು ಉಪಸ್ಥಿತರಿದ್ದರು.