ನ್ಯೂಸ್ ನಾಟೌಟ್: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಚುನಾವಣೆಯ ಬಗ್ಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ. ಹೊಂದಾಣಿಕೆಯನ್ನು ನಾವು ಒಂದು ವೇಳೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.